ಮೈಸೂರು ನಗರ

ಮೈಸೂರು: ಹೈಟೆಕ್‌ ಬಸ್‌ ನಿರ್ಮಾಣಕ್ಕೆ ಅಸ್ತು ಎಂದ ಸರ್ಕಾರ

ಮೈಸೂರು: ಸುಮಾರು 127 ಕೋಟಿ ರೂ ವೆಚ್ಚದಲ್ಲಿ ನಗರದ ಬನ್ನಿ ಮಂಟಪದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಸಬರ್ಬನ್‌ ನಿಲ್ದಾಣದಲ್ಲಿ ಪ್ರತಿನಿತ್ಯ 2700ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್‌ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ.

ನಗರದ ಮಧ್ಯ ಭಾಗದಲ್ಲಿರುವ ಸಬರ್ಬನ್‌ ಬಸ್‌ ನಿಲ್ದಾಣವನ್ನು ಯಾವುದೇ ಕಾರಣಕ್ಕೂ ಸಂಪೂರ್ಣವಾಗಿ ಸ್ಥಳಾಂತರ ಮಾಡುವುದಿಲ್ಲ. ಅಂತರ್‌ ರಾಜ್ಯ ಬಸ್‌ಗಳನ್ನು ಮಾತ್ರ ಅಲ್ಲಿಂದ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಎಲ್ಲಾ ಬಸ್‌ಗಳ ಸಂಚಾರ ಇಲ್ಲೇ ಆಗುತ್ತದೆ ಎಂದು ಮೈಸೂರು ಗ್ರಾಮಾಂತರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ಶ್ರೀನಿವಾಸ್‌ ತಿಳಿಸಿದ್ದಾರೆ.

ಬನ್ನಿಮಂಟಪದ 64 ಎಕರೆ ಪ್ರದೇಶದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ 14 ಎಕರೆ ಪ್ರದೇಶದಲ್ಲಿ ಬಸ್‌ ನಿಲ್ದಾಣ ನಿರ್ಮಿಸಲಾಗುತ್ತದೆ. ಸರ್ಕಾರದಿಂದ ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಬಸ್‌ ನಿಲ್ದಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಏಪ್ರಿಲ್‌ ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದ್ದು, ಇನ್ನು ಎರಡು ವರ್ಷಗಳಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣ ಆಗಲಿದೆ ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago