ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್ ರೇಸಿಂಗ್ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ.
ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್ ಹೊತ್ತಿ ಉರಿದಿದೆ. ರೇಸ್ ಮಾಡುತ್ತಿದ್ದ ಯುವಕರ ಬೈಕ್‌ಗೆ ಫುಡ್ ಡೆಲಿವರಿ ಬಾಯ್ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಆಯತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಬನ್ನಿಮಂಟಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.





