Mysuru | Journalists enjoy playing cricket
ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರೆಯಿತು.
ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣಕುಮಾರ್ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮನೋವಿಕಾಸ ಮತ್ತು ಬುದ್ದಿ ಚುರುಕುಗೊಳ್ಳಲು ಕ್ರೀಡೆ ಪ್ರತಿಯೊಬ್ಬರಿಗೂ ಅಗತ್ಯ. ಹಾಗೆಯೇ ದೈಹಿಕ, ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ. ಕೆಲಸದ ಒತ್ತಡದ ನಡುವೆಯೂ ಪತ್ರಕರ್ತರು ಒಂದೆಡೆ ಸೇರಿ ಕ್ರೀಡೆಯಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣ ಕುಮಾರ್ ಮಾತನಾಡಿ, ಸಮಾಜದಲ್ಲಿ ವೈದ್ಯರಷ್ಟೇ ಪತ್ರಕರ್ತರ ಪಾತ್ರವು ಅತ್ಯಂತ ಅಗತ್ಯವಾದದ್ದು. ಪತ್ರ ಕರ್ತರು ದಿನನಿತ್ಯದ ಒತ್ತಡದ ಬದುಕಿನಲ್ಲಿ ಇಂತಹದೊಂದು ಕ್ರೀಡಾಕೂಟ ಅತ್ಯಂತ ಅವಶ್ಯವಾಗಿದೆ. ಕ್ರೀಡೆ ಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ಮೈಸೂರು ಪತ್ರಿಕೋದ್ಯಮಕ್ಕೆ ಕೆಬಿಜಿ ಮತ್ತು ಕೋಟಿ ಅವರು ಎರಡು ಕಣ್ಣುಗಳಿದ್ದಂತೆ. ಕೆಬಿಜಿ ಅವರಿಗೆ ಕ್ರೀಡೆಯ ಬಗ್ಗೆ ಸಾಕಷ್ಟು ಒಲವಿತ್ತು. ಅವರ ಅಗಲಿಕೆಯ ಸ್ಮರಣಾರ್ಥ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಕ್ರಿಕೆಟ್ ಕಪ್‌ಗೆ ‘ಕೆಬಿಜಿ ಕಪ್’ ಎಂದು ಹೆಸರಿಡಲಾಗಿದೆ. ಈ ಮೂಲಕ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.
ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಸಿ.ವೆಂಕಟೇಶ್, ಮಹಾರಾಣಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಭಾಸ್ಕರ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ, ಹನಗೂಡು ವೆಂಕಟಪ್ಪ, ಕೃಷ್ಣಾಜೀ ರಾವ್, ರವಿ ಪಾಂಡವಪುರ, ಖಜಾಂಚಿ ಸುರೇಶ್, ಪ್ರಗತಿ ಗೋಪಾಲ್‌ಕೃಷ್ಣ, ದ.ರಾ.ಮಹೇಶ್, ಹನಗೂಡು ನಟರಾಜ್, ಶಿವಣ್ಣ, ರಾಜಣ್ಣ, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…