ಮೈಸೂರು ನಗರ

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು ಕರಗ ಮಹೋತ್ಸವ ಕೂಡ ಒಂದು. ಬೆಂಗಳೂರಿನ ಕರಗದಂತೆಯೇ ರಾಜ್ಯಾದ್ಯಂತ ಖ್ಯಾತಿ ಪಡೆದಿರುವ ಈ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹೋತ್ಸವಕ್ಕೆ, ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಮಾರಮ್ಮ ದೇವಸ್ಥಾನದಲ್ಲಿ ಚಾಲನೆ ದೊರೆಯಿತು.

೫ನೇ ದಿನ ಇತಿಹಾಸ ಪ್ರಸಿದ್ಧವಾದ ೧೦೨ನೇ ವರ್ಷದ ಮೈಸೂರಿನ ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆ ಶನಿವಾರ ರಾತ್ರಿ ದೇವಸ್ಥಾನದಿಂದ ಹೊರಟ ಕರಗವು ನಗರದ ಪ್ಯಾಲೆಸ್ ಆಫೀಸ್ ರಸ್ತೆ, ನೂರಡಿ ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ, ನಲ್ಲಪ್ಪ ಠಾಣಾ ರಸ್ತೆ, ಶಿವರಾಂಪೇಟೆ, ಸಯ್ಯಾಜಿರಾವ್ ರಸ್ತೆ, ಮಿಷನ್ ಆಸ್ಪತ್ರೆ ರಸ್ತೆ, ಕಬೀರ್ ರಸ್ತೆ, ಕಾಳಮ್ಮ ಗುಡಿ ರಸ್ತೆ, ಇರ್ವಿನ್ ರಸ್ತೆ, ಕುರುಬಗೇರಿ, ಕುಂಬಾರಗೇರಿ, ಅಶೋಕ ರಸ್ತೆ, ನಜರಬಾದ್‌, ಮೃಗಾಲಯ ರಸ್ತೆ ಮಾರ್ಗವಾಗಿ ಸಾಗಿ ಭಾನುವಾರ (ಏ.೨೬ರಂದು) ಬೆಳಗ್ಗೆ ದೇವಸ್ಥಾನಕ್ಕೆ ಹಿಂತಿರುಗಿತು.

ಕರಗ ಮಹೋತ್ಸವ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸಿತು. ಮೆರವಣಿಗೆಗೆ ವೀರಗಾಸೆ, ಕಂಸಾಳೆ, ಡೊಳ್ಳು, ತಮಟೆ, ಗಾರುಡಿ ಗೊಂಬೆ, ನಾದಸ್ವರ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು.

ಮಹತ್ವ
ಮೈಸೂರು ಕರಗ ಮಹೋತ್ಸವವು ಕೇವಲ ಧಾರ್ಮಿಕ ಕಾರ್ಯಕ್ರಮವಷ್ಟೇ ಅಲ್ಲ, ಇದು ಸಾಂಸ್ಕೃತಿಕ ಮತ್ತು ಸಾವಾಜಿಕ ಸೌಹಾರ್ದತೆಯ ಸಂಕೇತವಾಗಿದೆ. ಈ ಉತ್ಸವವು ಸ್ಥಳೀಯ ಜನರನ್ನು ಒಗ್ಗೂಡಿಸುವುದರ ಜತೆಗೆ, ಪರಂಪರೆಯನ್ನು ಉಳಿಸಿ-ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕರಗದ ಸಂದರ್ಭದಲ್ಲಿ ಸಾಂಪ್ರದಾಯಿಕ ಕಲೆಗಳು, ನೃತ್ಯ, ಸಂಗೀತ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತವೆ. ಇದು ಯು ಜನಾಂಗಕ್ಕೆ ತಮ್ಮ ಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತದೆ.

ಅನ್ನ ಸಂತರ್ಪಣೆ
ಕರಗ ಮಹೋತ್ಸವದ ಅಂಗವಾಗಿ ಶನಿವಾರ ಅನ್ನ ಸಂತರ್ಪಣೆ ನಡೆಯಿತು. ಸುಮಾರು ೧೦ ಸಾವಿರ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದರು ಎಂದು ಮುನೇಶ್ವರ ಸ್ವಾಮಿ ದೇವಸ್ಥಾನದ ಆರ್ಚಕರಾದ ಕಾರ್ತೀಕ್ ತಿಳಿಸಿದರು.

ಕರಗದಲ್ಲಿ ಇಂದು
ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ಅಂಬಲಿ ಪೂಜೆ ನಡೆಯುತ್ತದೆ. ನಂತರ ಆರಿಶಿನ ನೀರಿನ ಓಕುಳಿ ಆಡಲು ಕರಗವು ದೇವಸ್ಥಾನದಿಂದ ಹೊರಡುವುದು. ನಂತರ ೪ ಗಂಟೆಯಿಂದ ಭಕ್ತಾದಿಗಳಿಂದ ತಂಬಿಟ್ಟು ಆರತಿ ನೆರವೇರಲಿದೆ. ರಾತ್ರಿ ೭ ಗಂಟೆಗೆ ಕರಗವು ದೇವಸ್ಥಾನದಿಂದ ಹೊರಟು ಇಟ್ಟಿಗೆಗೂಡಿನ ಎಲ್ಲಾ ಬೀದಿಗಳಲ್ಲಿ ಆರತಿ ಪೂಜೆ ಸ್ವೀಕರಿಸಿ ದೇವಸ್ಥಾನ ತಲುಪುವುದು. ರಾತ್ರಿ ೧೨ ಗಂಟೆಗೆ ನೈವೇದ್ಯದೊಂದಿಗೆ ಮಹಾಮಂಗಳಾರತಿ ನೆರವೇರಲಿದೆ. ದಿ.೨೭ರ ಸೋಮವಾರದಂದು ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಪಶ್ವಿಮವಾಹಿನಿಯಲ್ಲಿ ಕರಗವನ್ನು ವಿಸರ್ಜಿಸಲಾಗುವುದು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago