Mysore
24
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

ಮೈಸೂರು: ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ ಎಲ್‌ ನಾಗೇಂದ್ರ ಆಯ್ಕೆ

ಮೈಸೂರು: ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ ಬಿ.ಎಲ್‌.ನಾಗೇಂದ್ರ ಆಯ್ಕೆಯಾಗಿದ್ದು, ಅವರ ಅಭಿಮಾನಿಗಳು, ಹಿತೈಸಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿ ಚುನಾವಣಾಧಿಕಾರಿ ಡಾ.ಸಿದ್ದರಾಮಯ್ಯ ಅವರು ಎಲ್‌. ನಾಗೇಂದ್ರ ಅವರ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ. ಚುನಾವಣಾಧಿಕಾರಿ ಡಾ. ಸಿದ್ದರಾಮಯ್ಯ ಅವರು ಕೂಡ ಅಭಿನಂದನೆ ಸಲ್ಲಿಸಿದರು.

ಎಲ್‌. ನಾಗೇಂದ್ರ ಮಾತನಾಡಿ, ಬಿಜೆಪಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಬ್ದಾರಿಯನ್ನು ಹೊರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಧನ್ಯಾವದ ತಿಳಿಸುತ್ತೇನೆ. ಹೋದ ಲೋಕಸಭೆ ಚುನಾವಣೆಯಲ್ಲಿ ಒಂದೂವರೆ ಲಕ್ಷ ಅಂತರದಲ್ಲಿ ಗೆಲ್ಲಿಸಿಕೊಂಡು ಬಂದಿದ್ದೇವೆ. ಅದು ನಿಮ್ಮೆಲ್ಲರ ಸಹಾಕಾರದಿಂದ ಸಾಧ್ಯವಾಯಿತು ಎಂದರು.

ಹಾಗೆಯೇ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಆರ್ಥಿಕವಾಗಿ ಭಾರತ ಐದನೇ ಸ್ಥಾನವಾಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ ಅವರ 140 ಕೋಟಿ ಜನರ ಹಿತವನ್ನು ಕಾಪಾಡಲು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ದುಡಿಯೋಣ. ನಿಮ್ಮ ಸಹಕಾರ ಹೀಗೆ ಇರಲಿ ಎಂದು ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.

Tags: