ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ವಾಜಮಂಗಲ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಪ್ರತಿಭಟನಾಕಾರರು, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕು, ಅವರಿಗೆ ಕಠಿಣ ಶಿಕ್ಷೆ ಜರುಗಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:- ಸಾರ್ವಜನಿಕ ಅಹವಾಲು ಆಲಿಸಿದ ಸಿಎಂ
ಭಗವಾನ್ ಬುದ್ಧ ವೃತ್ತದ ಬಳಿ ಕೆಲಕಾಲ ಸಭೆ ನಡೆಸಿದ ಪ್ರತಿಭಟನಾಕಾರರು, ಕಿಡಿಗೇಡಿಗಳನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ಆಗುವವರೆಗೂ ಪ್ರತಿಭಟನೆ ನಿಲ್ಲಿಸಬಾರದು ಎಂದು ಎಚ್ಚರಿಕೆ ನೀಡಿದರು.
ಮಾಜಿ ಮೇಯರ್ ಪುರುಷೋತ್ತಮ್, ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು.





