ಮೈಸೂರು: ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮೈಸೂರು ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆ ಸರ್ಕಾರ ಅನುಮತಿ ನೀಡಿದೆ.
ಮೈಸೂರು ಮುಡಾದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹಾಗೂ ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು.
ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇದನ್ನು ಓದಿ : ಆನ್‌ಲೈನ್ ಬೆಟ್ಟಿಂಗ್ ಆಪ್: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್
ಇನ್ನು ಸಿಎಂ ಸಿದ್ದರಾಮಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ. ಕಳೆದ ಆರು ತಿಂಗಳಿನಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ಚಾಟಿ ಬೀಸಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶ ನೀಡಿ ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಎಚ್.ವಿ.ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದು, ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.29ಕ್ಕೆ ಮುಂದೂಡಿಕೆ ಮಾಡಿದೆ.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…