yadhuveer krishnadatta wadiyar
ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ಹೊರಹಾಕಿದ್ದಾರೆ.
ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್ ಒಡೆಯರ್ ಅವರು, ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಆಗಿಲ್ಲ. 2 ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ.
ಇದನ್ನೂ ಓದಿ:- ನಾವು ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದ್ದೇವೆ: ಸಂಸದ ಯದುವೀರ್ ಒಡೆಯರ್
ಯಾಕೆ ಸರ್ಕಾರ ಪಾಲಿಕೆ ಚುನಾವಣೆ ನಡೆಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ. ನಾವು ಸಾಕಷ್ಟು ಬಾರಿ ಚುನಾವಣೆ ನಡೆಸಿ ಎಂದು ಮನವಿ ಮಾಡಿದ್ದೇವೆ. ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಯಾರು ಕೂಡ ಪ್ರತಿನಿಧಿಗಳೇ ಇಲ್ಲ. ಜನಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದು ಆಗ್ರಹಿಸಿದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…