ಮೈಸೂರು: ಮೇ. 4ರಂದು ಮೈಸೂರು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನೀಟ್ ಪರೀಕ್ಷೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ 7,709 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲಿದ್ದು, ನೀಟ್ ಪರೀಕ್ಷೆ ಸುಗಮವಾಗಿ, ನ್ಯಾಯಯುತವಾಗಿ ನಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ:- ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್
ಪ್ರತಿ ಪರೀಕ್ಷಾ ಕೇಂದ್ರಕ್ಕೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಯಾವುದೇ ಲೋಪಗಳು ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.





