ಮೈಸೂರು ನಗರ

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ ನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ ಮಾಡಿದ್ದಾರೆ.

ಈ ಸಂಬಂಧ ಗುರುವಾರ ತಮ್ಮ ಕಚೇರಿಯ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಈಗಾಗಲೇ ನಗರದ ವ್ಯಾಪ್ತಿಯಲ್ಲಿ ಡಿಸಿಪಿ ಅವರ ನೇತೃತ್ವದಲ್ಲಿ ರೌಡಿ ಪ್ರತಿಬಂಧಕ ದಳ ಸಕ್ರಿಯವಾಗಿದೆ ಎಂದು ತಿಳಿಸಿದರು.

ತಳ ಮಟ್ಟದಲ್ಲಿ ರೌಡಿಗಳ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುವುದರೊಂದಿಗೆ ಅಕ್ರಮ ತಡೆಗಟ್ಟಲು ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಪ್ರತಿಬಂಧಕ ಸ್ಥಳ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಎಸ್‌ಐ ನೇತೃತ್ವದಲ್ಲಿ ನಾಲ್ವರು ಸಿಬ್ಬಂದಿಗಳನ್ನು ಒಳಗೊಂಡ ರೌಡಿ ಪ್ರತಿಬಂಧಕ ದಳವನ್ನು ಸ್ಥಾಪಿಸುವ ಮೂಲಕ ಠಾಣಾ ವ್ಯಾಪ್ತಿಯಲ್ಲಿನ ರೌಡಿಗಳ ಚಲನ ವಲನಗಳ ಮೇಲೆ ವಿಶೇಷ ನಿಗಾವಹಿಸಬೇಕು ಎಂದು ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಇದುವರೆವಿಗೂ ಮಾದಕ ವಸ್ತು ಸಾಗಾಟದಲ್ಲಿ ಸಕ್ರಿಯವಾಗಿದ್ದ ೨೦ಕ್ಕೂ ಹೆಚ್ಚು ಮಂದಿ ರೌಡಿ ಶೀಟರ್‌ಗಳನ್ನು ಪತ್ತೆ ಹಚ್ಚಿ ಗಡಿಪಾರು ಮಾಡಲಾಗಿದೆ. ಈ ಕಾರ್ಯಚರಣೆ ನಿರಂತರವಾಗಿ ನಡೆಯಲಿದೆ. ಇದರೊಂದಿಗೆ ಡಿಸಿಪಿ ನೇತೃತ್ವದಲ್ಲಿರುವ ರೌಡಿ ನಿಗ್ರಹ ದಳವು ಸಹ ಪ್ರತ್ಯೇಕವಾಗಿ ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದರು.

ಮೈಸೂರು ನಗರದಲ್ಲಿ ೭೦೦ ಮಂದಿ ರೌಡಿಶೀಟರ್‌ಗಳನ್ನು ಪಟ್ಟಿ ಮಾಡಲಾಗಿದ್ದು, ಕೆಲವರು ಮಾತ್ರ ಸಕ್ರೀಯರಾಗಿದ್ದಾರೆ. ಅಂತಹವರ ಮೇಲೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ರೌಡಿಗಳನ್ನು ಪತ್ತೆ ಹಚ್ಚಿ: ಕಮಿಷನರ್
ಇದಕ್ಕೂ ಮುನ್ನ ಅಧಿಕಾರಿಗಳ ಸಭೆ ನಡೆಸಿದ ಆಯುಕ್ತರು, ನಿಮ್ಮ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿ ಇಲ್ಲದಿದ್ದರೂ, ರೌಡಿ ಚಟುವಟಿಕೆಯಲ್ಲಿ ನಿರತರಾಗಿರುವವರನ್ನು ಪತ್ತೆಹಚ್ಚಿ ಅಂತಹವರನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಬೇಕು. ಅಗತ್ಯವಿದ್ದಲ್ಲಿ ರೌಡಿ ಶೀಟರ್ ತೆರೆಯಬೇಕು ಎಂದು ಸೂಚನೆ ನೀಡಿದರು.

ಹಳೆಯ ರೌಡಿಗಳು ವಾಸಿಸುವ ಸ್ಥಳ, ಅವರ ಆಧಾರ್ ಕಾರ್ಡ್, ಪಾನ್ ಕಾರ್ಡ್, ಅವರ ಬ್ಯಾಂಕ್ ಖಾತೆ ವಿವರ, ಅವರ ಉದ್ಯೋಗ ಎಲ್ಲದರ ಸಂಪೂರ್ಣ ಮಾಹಿತಿಯನ್ನು ನೀವು ಹೊಂದಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಡಿಸಿಪಿ ಕೆ.ಎನ್.ಸುಂದರರಾಜ್, ನಗರ ವ್ಯಾಪ್ತಿಯ ನಾಲ್ಕು ವಿಭಾಗದ ಎಸಿಪಿಗಳು, ಎಲ್ಲಾ ಠಾಣೆಯ ಇನ್ಸಪೆಕ್ಟರ್‌ಗಳು ಸಭೆಯಲ್ಲಿ ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

3 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

5 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

10 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

37 mins ago

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

1 hour ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

11 hours ago