ಮೈಸೂರು | ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪೊಲೀಸರು

ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಹೆಚ್ಚು ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡಿ ಅಪರಾದಗಳ ಬಗ್ಗೆ ಎಚ್ಚರ ವಹಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.

ಇದನ್ನೂ ಓದಿ:- ಸ್ವಗ್ರಾಮಕ್ಕೆ ಭೇಟಿ: ಸ್ನೇಹಿತರೊಂದಿಗೆ ಹಳೆಯ ನೆನಪು ಮೆಲುಕು ಹಾಕಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ.

ಮೈಸೂರು ನಗರದ ಕೃಷ್ಣ ರಾಜ ಪೊಲೀಸ್ ಠಾಣೆ, ಆಲನಹಳ್ಳಿ ಪೊಲೀಸ್ ಠಾಣೆ, ಸರಸ್ವತಿಪುರಂ ಪೊಲೀಸ್ ಠಾಣೆ, ವಿದ್ಯಾರಣ್ಯಪುರಂ ಪೊಲೀಸ್ ಠಾಣೆ, ನಜರ್ ಬಾದ್ ಪೊಲೀಸ್ ಠಾಣೆ, ಹೆಬ್ಬಾಳ್ ಪೊಲೀಸ್ ಠಾಣೆ, ದೇವರಾಜ ಹಾಗೂ ಲಷ್ಕರ್ ಪೋಲಿಸ್ ಠಾಣೆಯ ಪೊಲೀಸರುಗಳು ತಮ್ಮ ತಮ್ಮ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಸ್ತು ಮಾಡಿ, ಬಸ್ ನಿಲ್ದಾಣ, ಸಾರ್ವಜನಿಕ ಪಾರ್ಕ್ ಗಳು, ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮನೆಗಳ್ಳತನ, ಸರಗಳ್ಳತನ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago