ಮೈಸೂರು: ನಗರದ ಎಸ್ಪಿ ಕಚೇರಿಯ ಪಕ್ಕದ ರಸ್ತೆಯಲ್ಲಿ ಕಟಾವು ಮಾಡಿದ್ದ 40 ಮರಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದ ವಿವಿಧ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ನಿನ್ನೆ ತಾನೇ ಅದೇ ರಸ್ತೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಇಂದು ಅದೇ ಗಿಡಗಳಿಗೆ ಗಾರ್ಡ್‌ಗಳನ್ನು ಹಾಕುವ ಮೂಲಕ ರಕ್ಷಣೆಗೆ ಮುಂದಾಗಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಿನ್ನೆ ಮರಗಳನ್ನು ಕಡಿದ ಜಾಗದಲ್ಲಿ ನೆಟ್ಟ ಸಸಿಗಳಿಗೆ ರೈತ ಸಂಘದ ಪ್ರಮುಖರು ರಘು ಲಾಲ್ ಕಂಪನಿಯ ರಾಘವನ್ ಅವರೊಂದಿಗೆ ಚರ್ಚಿಸಿ, ರಘುಲಾಲ್ ಕಂಪನಿಯ ವತಿಯಿಂದ ಮೆಟಲ್ ಗಾರ್ಡ್‌ಗಳನ್ನು ಪಡೆದುಕೊಂಡು ಇಂದು ರೈತ ಸಂಘವು ಮೆಟಲ್ ಗಾರ್ಡ್‌ಗಳನ್ನು ಸಸಿಗಳ ಸುತ್ತ ಹಾಕಿ ನೆಲಕ್ಕೆ ಕಾಂಕ್ರೀಟ್ ಹಾಕುವ ಮೂಲಕ ಅದನ್ನು ಭದ್ರಪಡಿಸುವ ಕೆಲಸ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಂಜು ಕಿರಣ್ ನೇತೃತ್ವದಲ್ಲಿ ಗಿಡಗಳ ರಕ್ಷಣೆಗೆ ಗಾರ್ಡ್‌ಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ:- ಮೈಸೂರು| ಮರಗಳ ಮಾರಣಹೋಮ ಖಂಡಿಸಿ ಪುಟಾಣಿಗಳಿಂದ ಪ್ರತಿಭಟನೆ
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…
ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…
ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್…
ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್…
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…