ಮೈಸೂರು: ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸದಲ್ಲಿ ಸಾರ್ವಜನಿಕರು ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಮೊನ್ನೆ ವಯೋ ಸಹಜ ಖಾಯಿಲೆಗಳಿಂದ ವಿಧಿವಶರಾಗಿರುವ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸಕ್ಕೆ ತರಲಾಗಿದೆ.
ಇದನ್ನು ಓದಿ : ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಭೈರಪ್ಪ ನಿವಾಸದ ಮುಂದೆ ನೂರಾರು ಸಾರ್ವಜನಿಕರು ಜಮಾವಣೆಗೊಂಡಿದ್ದು, ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕುಟುಂಬಸ್ಥರಿಂದ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.





