ಮೈಸೂರು ನಗರ

ಸ್ವಚ್ಛ ನಗರಿ ಮೈಸೂರಿನಲ್ಲಿ ಅಶುಚಿತ್ವ ತಾಂಡವ: ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ

ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಹಾಗೂ ಮಲ್ಲಿಗೆ ನಗರಿ ಎಂದೆಲ್ಲಾ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ಒಂದೆಡೆ ಸ್ವಚ್ಛತಾ ಸರ್ವೇಕ್ಷಣಾ ಅಭಿಯಾನ ನಡೆಯುತ್ತಿದ್ದು, ಇನ್ನೊಂದೆಡೆ ಯುಜಿಡಿ ಸಮಸ್ಯೆಯಿಂದ ರಸ್ತೆ ಗಬ್ಬೆದ್ದು ನಾರುತ್ತಿದೆ.

ಮೈಸೂರಿನ ಅಗ್ರಹಾರದಿಂದ ಅರಮನೆಗೆ ಸಂಚರಿಸುವ ಮಾರ್ಗದಲ್ಲಿ ಯುಜಿಡಿ ತೆರೆದುಕೊಂಡಿದ್ದು, ಯುಜಿಡಿ ಬಾಕ್ಸ್‌ನಿಂದ ರಸ್ತೆ ಮಾರ್ಗದಲ್ಲೇ ಕೊಳಚೆ ನೀರು ಹರಿದು ಗಬ್ಬೆದ್ದು ನಾರುತ್ತಿದೆ. ಪರಿಣಾಮ ವಾಹನ ಸವಾರರು ಕೊಳಚೆ ನೀರಿನಲ್ಲೇ ಸಂಚರಿಸುತ್ತಿದ್ದು, ಜನಸಾಮಾನ್ಯರಂತೂ ಮೂಗು ಮುಚ್ಚಿ ರಸ್ತೆ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯಲ್ಲಿ ಸಂಜೆಯಾದರೆ ಸಾಕು ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕಳೆದ ಒಂದು ವಾರದಿಂದಲೂ ರಸ್ತೆಯಲ್ಲಿ ಕೊಳಚೆ ನೀರು ಮಳೆ ನೀರಿನಂತೆ ಹರಿಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ.

ಸದ್ಯ ಸ್ವಚ್ಛತಾ ಅಭಿಯಾನದಲ್ಲಿ ನಿರತರಾಗಿರುವ ಪಾಲಿಕೆ ಅಧಿಕಾರಿಗಳು, ನಗರದ ಮಧ್ಯಭಾಗದ ಸಮಸ್ಯೆಯನ್ನೇ ಸರಿಪಡಿಸದಿರುವುದು ಸಾರ್ವಜನಿಕ ವಲಯದಲ್ಲಿ ಬೇಸರ ತಂದಿದೆ.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಾರ್ವಜನಿಕರು, ಈ ರಸ್ತೆಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ಓಡಾಡಲು ತೀವ್ರ ಕಷ್ಟವಾಗುತ್ತಿದೆ. ಸಂಜೆಯಾದರಂತೂ ಈ ರಸ್ತೆಗೆ ಬರಲು ಸವಾರರು ಹಿಂದೇಟು ಹಾಕುತ್ತಿದ್ದಾರೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಪ್ರಚಂಡ ಬಹುಮತದಿಂದ ಬಿಜೆಪಿ ಗೆಲ್ಲಲಿದೆ: ಅಮಿತ್‌ ಶಾ ವಿಶ್ವಾಸ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು…

26 mins ago

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…

60 mins ago

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

2 hours ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

2 hours ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

3 hours ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

3 hours ago