ಮೈಸೂರು ನಗರ

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು, ಇಂದು ಸಂಜೆ 5:30ರ ಒಳಗೆ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿವೆ.

ಜಾನಕಿಯಮ್ಮ ಅವರು ಬದುಕಿದ್ದಾಗ, ತಮ್ಮ ನಿಧನದ ನಂತರ ತಮ್ಮ ನೆಚ್ಚಿನ ತೋಟದಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದು ಆಸೆ ವ್ಯಕ್ತಪಡಿಸಿದ್ದರು. ಅವರ ಕೊನೆಯ ಕೋರಿಕೆಯಂತೆ ಕಣಿಯನಹುಂಡಿ ಗ್ರಾಮದಲ್ಲಿರುವ ಅವರ ತೋಟದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಹಾಗೂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಜೆಸಿಬಿ ಯಂತ್ರಗಳ ಮೂಲಕ ತೋಟದ ಜಾಗವನ್ನು ಸಮತಟ್ಟುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಗ್ರಾಮದ ಮುಖಂಡ ಬಸವರಾಜು “ಸ್ವರ ಸಾಮ್ರಾಟೆ ಎಸ್. ಜಾನಕಿ ಅವರು ತಮ್ಮ ಬದುಕಿನ ಕಡೆಯ ದಿನಗಳನ್ನು ಕಣಿಯನಹುಂಡಿ ಗ್ರಾಮದಲ್ಲೇ ಕಳೆಯಲು ಗಟ್ಟಿ ನಿರ್ಧಾರ ಮಾಡಿದ್ದರು. ಇದೇ ಕಾರಣಕ್ಕಾಗಿ ಅವರು ಇಲ್ಲಿ ಎರಡು ಎಕರೆ ಜಮೀನನ್ನು ಖರೀದಿ ಮಾಡಿಸಿದ್ದರು. ನಾವೇ ಖುದ್ದಾಗಿ ನಿಂತು ಅವರಿಗೆ ಈ ಜಮೀನನ್ನು ಕೊಡಿಸಿದ್ದೆವು” ಎಂದು ತಿಳಿಸಿದರು.

“ಬಹಳ ಪ್ರೀತಿಯಿಂದ ಜಮೀನು ಕೊಂಡಿದ್ದ ಜಾನಕಿಯಮ್ಮ ಅವರು, ಅಲ್ಲಿ ತಮಗಾಗಿ ಒಂದು ಸುಂದರವಾದ ಮನೆಯನ್ನು ಕಟ್ಟುವ ಬಗ್ಗೆಯೂ ನಮ್ಮೊಂದಿಗೆ ಹಲವು ಬಾರಿ ಮಾತನಾಡಿದ್ದರು. ಆದರೆ ವಿಧಿಯ ಆಟ ಬೇರೆಯೇ ಆಗಿತ್ತು. ಕಡೆಯ ದಿನಗಳಲ್ಲಿ ಅವರು ಕಟ್ಟಬಯಸಿದ್ದ ಮನೆಯ ಜಾಗದಲ್ಲೇ, ಅವರ ಕೊನೆಯ ಆಸೆಯಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ” ಎಂದು ಬಸವರಾಜು ಭಾವುಕರಾಗಿ ನುಡಿದರು.

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago