ಮೈಸೂರು: ಸಂಸತ್‌ನಲ್ಲಿ ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದವರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಪೈಲಟ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಎಸ್‌ಡಿಪಿಐ ಕಾರ್ಯಕರ್ತರು, ವಕ್ಛ್ ಮಸೂದೆ ಬಿಲ್ ಪ್ರತಿ ಹರಿದು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ಮಾಡಿದರೆ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ತಿದ್ದುಪಡಿ ಹಿಂಪಡೆಯುವವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಪಕ್ಷದ ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಮಾತನಾಡಿ, ಕೇಂದ್ರ ಸರ್ಕಾರ ವಕ್ಛ್ ತಿದ್ದುಪಡಿ ಮಸೂದೆಯನ್ನು ‘ಊಮಿದ್‘ ಹೆಸರಿನಲ್ಲಿ ಮಂಡನೆ ಮಾಡಿದೆ. ಇದು ಸಂವಿಧಾನ ವಿರೋಧಿ ಮತ್ತು ಮುಸ್ಲಿಮರ ವಿರೋಧಿ ನಡೆಯಾಗಿದೆ ಎಂದು ದೂರಿದರು.
ಈ ದೇಶದ ರೈತರು, ಕಾರ್ಮಿಕರು, ದಲಿತರಿಗೆ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಾ ಬಂದ ಬಿಜೆಪಿ ಸರ್ಕಾರ ತನ್ನ ವ್ಯಾಪ್ತಿಯನ್ನು ಮತ್ತಷ್ಟು ಚಾಚಿ ಮುಸ್ಲಿಮರನ್ನು ಹತ್ತಿಕ್ಕಬೇಕು ಎಂದು ಪ್ರಯತ್ನಿಸುತ್ತಿದೆ. ಇದು ಎಂದಿಗೂ ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
ವಕ್ಛ್ ಮಸೂದೆಗೆ ತಿದ್ದುಪಡಿ ತರಬೇಕು ಎಂಬ ಚರ್ಚೆ ಎದ್ದಾಗಲೇ ವಿರೋಧ ಪಕ್ಷಗಳು ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಿದವು. ಎಸ್‌ಡಿಪಿಐ ಕೂಡ ವಿರೋಧ ಮಾಡಿತ್ತು. ಈ ಸಂದರ್ಭದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದರು. ಆದರೆ, ಆ ಜಂಟಿ ಸದನ ಸಮಿತಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೆ ಏಕಪಕ್ಷೀಯವಾಗಿ ತನ್ನ ವರದಿ ನೀಡಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರಫತ್ ಖಾನ್, ಮುಖಂಡ ಅಜ್ಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಉಪಾಧ್ಯಕ್ಷ ಸಫಿ, ನ್ಯಾಷನಲ್ ವಿಮ್ ಕೋ-ಆರ್ಡಿನೇಟರ್ ಫೈರೋಜ್, ಮಾಧ್ಯಮ ವಕ್ತಾರ ತಬ್ರೇಜ್ ಸೇಠ್ ಇನ್ನಿತರರು ಹಾಜರಿದ್ದರು.
ಹೈದರಾಬಾದ್: ಅಭಿಷೇಕ್ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್ ಹೆಡ್ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ 245…
ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಟಗಳ್ಳಿಯ ಆರ್‌ಬಿಐ…
ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ…
ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ…
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇಲ್ಲ…
ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ…