ಮೈಸೂರು: ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮಾನಸಗಂಗೋತ್ರಿಯಲ್ಲಿರುವ ಮಾಸ್ಟರ್ ಆಫ್ ಲಾ ವಿಭಾಗದಲ್ಲಿ ಮೂಲಭೂತ ಸಮಸ್ಯೆಗಳ ಆಗರವೇ ಇದೆ ಎಂದು ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರು, ಶೌಚಾಲಯ, ಸೂಕ್ತ ಗ್ರಂಥಾಲಯ ಸೇರಿದಂತೆ ಹಲವಾರು ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ. ಈ ಕುರಿತು ವಿದ್ಯಾರ್ಥಿಗಳು ಎಷ್ಟೇ ಹೇಳಿದರು ಇದರ ಬಗ್ಗೆ ವಿವಿಯ ಆಡಳಿತ ಮಂಡಳಿ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ವಿವಿಯ ವಿರುದ್ಧ ಹರಿಹಾಯ್ದರು.
ಶೀಘ್ರವೇ ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳು ಕಾನೂನು ವಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಬೇಕಾದ ಆಗತ್ಯ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.





