ಮೈಸೂರು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್‌ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅಂಕ ಹೆಚ್ಚು ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಪೀಡಿಸಿದ್ದಾರೆ ಎನ್ನಲಾಗಿದೆ.
ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಫೇಲ್ ವಾಡುತ್ತೇನೆ ಎಂದು ಬೆದರಿಸಿದ್ದಾರೆ. ಯುವತಿಯು ಮಹಿಳಾ ಉಪನ್ಯಾಸಕರ ಬಳಿ ಈ ವಿಷಯವನ್ನು ಹೇಳಿಕೊಂಡಿದ್ದಾರೆ. ನನಗೆ ಮಾನಸಿಕವಾಗಿ ತೊಂದರೆ ನೀಡುತ್ತಿರುವ ಉಪನ್ಯಾಸಕ ಭರತ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ, ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





