Mysore
27
broken clouds

Social Media

ಭಾನುವಾರ, 25 ಜನವರಿ 2026
Light
Dark

ಎಚ್.ಎಸ್.ರೋಹಿತ್ ಗೆ ಪಿಎಚ್.ಡಿ ಪದವಿ

ಮೈಸೂರು: ಎಚ್.ಎಸ್.ರೋಹಿತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಲಭಿಸಿದೆ.

ಮಂಡ್ಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಚ್. ಎಂ. ವರದರಾಜು ಅವರ ಮಾರ್ಗದರ್ಶನದಲ್ಲಿ  ಸಂಶೋಧನೆ ನಡೆಸಿ ಎಚ್.ಎಸ್. ರೋಹಿತ್ ಅವರು ಸಾದರಪಡಿಸಿದ ‘ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ರಾಮನಗರ ಜಿಲ್ಲೆಯನ್ನು ಅನುಲಕ್ಷಿಸಿ ವಿಶೇಷ ಅಧ್ಯಯನ ’ ಎಂಬ ಮಹಾಪ್ರಬಂಧವನ್ನು ಮೈಸೂರು ವಿವಿ ಪಿಎಚ್.ಡಿ. ಪದವಿಗೆ ಅಂಗೀಕರಿಸಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:
error: Content is protected !!