Mysore
27
moderate rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಎದುರು ಸಭೆ ಕರೆಯಲಾಗಿದೆ.

ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು, ಪ್ರಗತಿಪರ ಚಿಂತಕರು, ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ಸೂಚಿಸಬೇಕು. ಅಲ್ಲದೆ, ಹೋರಾಟವನ್ನು ತೀವ್ರಗೊಳಿಸಲು ಸಲಹೆಗಳನ್ನು ನೀಡಬೇಕು ಎಂದು ಶಿಷ್ಯವೇತನರಹಿತ ಸಂಶೋಧಕರ ಬಳಗದ ಸಂಚಾಲಕ ರವಿಕುಮಾರ್ ಮತ್ತು ದಸಂಸ ಸಂಚಾಲಕ ಯಡದೊರೆ ಮಹದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

7 ದಿನಕ್ಕೆ ಕಾಲಿಟ್ಟ ಹೋರಾಟ
ಶಿಷ್ಯವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದ 7 ದಿನಗಳಿಂದ ಕ್ರಾಫರ್ಡ್ ಭವನದ ಮುಂಭಾಗ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಂಶೋಧಕರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಅಂಚೆಪೆಟ್ಟಿಗೆಗೆ ಹಾಕುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

 

Tags:
error: Content is protected !!