ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಎದುರು ಸಭೆ ಕರೆಯಲಾಗಿದೆ.
ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು, ಪ್ರಗತಿಪರ ಚಿಂತಕರು, ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ಸೂಚಿಸಬೇಕು. ಅಲ್ಲದೆ, ಹೋರಾಟವನ್ನು ತೀವ್ರಗೊಳಿಸಲು ಸಲಹೆಗಳನ್ನು ನೀಡಬೇಕು ಎಂದು ಶಿಷ್ಯವೇತನರಹಿತ ಸಂಶೋಧಕರ ಬಳಗದ ಸಂಚಾಲಕ ರವಿಕುಮಾರ್ ಮತ್ತು ದಸಂಸ ಸಂಚಾಲಕ ಯಡದೊರೆ ಮಹದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
7 ದಿನಕ್ಕೆ ಕಾಲಿಟ್ಟ ಹೋರಾಟ
ಶಿಷ್ಯವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದ 7 ದಿನಗಳಿಂದ ಕ್ರಾಫರ್ಡ್ ಭವನದ ಮುಂಭಾಗ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಂಶೋಧಕರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಅಂಚೆಪೆಟ್ಟಿಗೆಗೆ ಹಾಕುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…