ಮೈಸೂರು ನಗರ

Mysuru Water Supply: ಜು.8 ಹಾಗೂ 9 ರಂದು ಕೆಲವೆಡೆ ನೀರು ವ್ಯತ್ಯಯ

ಮೈಸೂರು: ಮೈಸೂರಿನಲ್ಲಿ ಸೋಮವಾರ(ಜು.8) ಮತ್ತು ಮಂಗಳವಾರ(ಜು.9) ಕಬಿನಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಮೈಸೂರು ನಗರಕ್ಕೆ ಕುಡಿಯವ ನೀರು ಸರಬರಾಜು ಮಾಡುವ ಕಬಿನಿ ನೀರು ಸರಬರಾಜು ಮೂಲ ಸ್ಥಾವರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಕೆಲವಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಪ್ರದೇಶದಲ್ಲಿ ನೀರು ಇರಲ್ಲ 

ವಾರ್ಡ್ ನಂ.42ರಿಂದ 51ರ ವ್ಯಾಪ್ತಿಯ ಕೆ.ಜಿ.ಕೊಪ್ಪಲು, ಜನತಾನಗರ, ಶಾರದಾದೇವಿನಗರ, ದಟ್ಟಗಳ್ಳಿ 3ನೇ ಹಂತ, ಕುವೆಂಪುನಗರ, ಜಯನಗರ, ಲಕ್ಷ್ಮೀಪುರಂ, ಸುಣ್ಣದಕೇರಿ, ಅಗ್ರಹಾರ ಹಾಗೂ ವಾರ್ಡ್ ನಂ.54ರಿಂದ 65ರ ವ್ಯಾಪ್ತಿಯ ಗುಂಡು ರಾವ್‌ನಗರ, ಚಾಮುಂಡಿಪುರಂ, ಕೃಷ್ಣಮೂರ್ತಿ ಪುರಂ, ಕುವೆಂಪುನಗರ, ಸಿಐಟಿಬಿ, ರಾಮಕೃಷ್ಣನಗರ, ಕುವೆಂಪುನಗರ ಎಂ-ಬ್ಲಾಕ್, ಅಶೋಕಪುರಂ, ವಿದ್ಯಾರಣ್ಯಪುರಂ ಮತ್ತು ಸುತ್ತಮುತ್ತ, ವಿಶ್ವೇಶ್ವರನಗರ, ಜೆ.ಪಿ.ನಗರ, ಅರವಿಂದನಗರ, ಶ್ರೀರಾಂಪುರ ಹಾಗೂ ಇತ್ಯಾದಿ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

6 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

6 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago