ಮೈಸೂರು: ವಾಹನಗಳ ದಟ್ಟಣೆ ತಡೆಯುವ ಉದ್ದೇಶದಿಂದ ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫ್ಲೈಓವರ್‌ನಿಂದ ಮೈಸೂರು ಪರಂಪರೆಗೆ ಧಕ್ಕೆ ಆಗಲ್ಲ. ಆದರೂ ಸಂಸದರು ವಿರೋಧ ಮಾಡುತ್ತಿರುವುದು ಯಾಕೆ ಎಂಬುದು ನಮಗೆ ಗೊತ್ತಾಗುತ್ತಿಲ್ಲ.
ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದೆ ಸರಿಯಬಾರದು. ಜನರು ನಮ್ಮೊಂದಿಗಿದ್ದಾರೆ. ಕೆಲವರ ಆಕ್ಷೇಪಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು ಎಂದು ಒತ್ತಾಯಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗ್ರೇಟರ್ ಮೈಸೂರು ಆಗಲೇಬೇಕು. ನಗರದ ಸುತ್ತಮುತ್ತಲಿನ 60ಕ್ಕೂ ಹೆಚ್ಚು ಬಡಾವಣೆಗಳಿಗೂ ಮೂಲಸೌಕರ್ಯ ಕೊಡಬೇಕು. ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ ಎಂದು ಹೇಳಿದರು.





