ಮೈಸೂರು: ಕೇಂದ್ರ ಸರ್ಕಾರ ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟಿಸಲಾಯಿತು.
ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪತ್ರಿಮೆ ಎದುರು ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕತರು ತಲೆ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು, ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸಿ ಸಿರಂಜಿನ ಮೂಲಕ ರಕ್ತ ಹೀರುತ್ತಿರುವ ಅಣಕ ಪ್ರದರ್ಶನ ಮಾಡಿ ಧಿಕ್ಕಾರ ಕೂಗಿ ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದುರಾಡಳಿತ ಬೆಲೆ ಏರಿಕೆಗೆ ಕಾರಣವಾಗಿದೆ. ಅಪಾರ ಪ್ರಮಾಣದಲ್ಲಿ ತೆರಿಗೆ ಸಂಗ್ರಹಿಸುವಲ್ಲಿ ಆಸಕ್ತಿ ತೋರುತ್ತಿರುವ ಕೇಂದ್ರ ಉದ್ಯಮಿಗಳ ಹಿತಾಸಕ್ತಿ ಕಾಪಾಡುವಲ್ಲಿ ನಿರತವಾಗಿದೆ. ಜನಸಾಮಾನ್ಯರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಈ ವೇಳೆ ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಬ್ರಾರ್ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಅದನ್ನು ಬಿಜೆಪಿ ವಿರೋಧಿಸಿ ಹೋರಾಟ ಮಾಡಬೇಕು. ಬದಲಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂದು ಕಿಡಿಕಾರಿದರು.
ನಗರ ಪ್ರಧಾನ ಕಾರ್ಯದರ್ಶಿಗಳಾದ ಲಖನ್, ದಿಲೀಪ್, ಸಲ್ಮಾನ್, ವಿನೋದ್, ಅದ್ನಾನ್, ಕೆ.ಆರ್.ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹೊಯ್ಸಳ ಮಲ್ಲೇಶ್, ರಾಕೇಶ್, ಕಾರ್ತಿಕ್, ಹೇಮಂತ್, ರಾಜೇಂದ್ರ, ಪವನ್, ವಿನಯ್, ಮೈಸೂರು ಬಸವಣ್ಣ, ಕಾಂಗ್ರೆಸ್ ಮಾಧ್ಯಮ ವಕ್ತಾರ ಕೆ.ಮಹೇಶ್ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…