ಮೈಸೂರು ನಗರ

ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಲು ಅಗತ್ಯ ಸಿದ್ಧತೆ: ಎಂ.ಕೆ ಸವಿತಾ

ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮೈಸೂರು : ʻಪ್ರವಾಸೋದ್ಯಮ ಮತ್ತು ಶಾಂತಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಅವರು ತಿಳಿಸಿದರು.

ಇಂದು ಪ್ರವಾಸೋದ್ಯಮ ಇಲಾಖೆಯ ಸಭಾಂಗಣದಲ್ಲಿ ನಡೆದ, ವಿಶ್ವ ಪ್ರವಾಸೋದ್ಯಮ ದಿನಾಚರಣಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಂತಿ ಹಾಗೂ ಭದ್ರತೆ ಇರುವಂತಹ ರಾಷ್ಟ್ರಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹಾಗಾಗಿ ಕಾರ್ಯಕ್ರಮದಲ್ಲಿ ಸರ್ವಧರ್ಮದ ಜನರನ್ನು ಒಳಗೊಂಡು ಅಂದು ಕಾರ್ಯಕ್ರಮದಲ್ಲಿ ಮೆರವಣಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಉದ್ಘಾಟನೆಯ ನಂತರ ಅರಮನೆಯಿಂದ ಹೈವೆ ಸರ್ಕಲ್ ವರೆಗೆ ಮೆರವಣಿಗೆಯನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ಗಜಪಡೆ, ಪೊಲೀಸ್ ಬ್ಯಾಂಡ್, ನಾದಸ್ವರ, ಡೊಳ್ಳುಕುಣಿತ, ಕಂಸಾಳೆ, ವೀರಗಾಸೆ, ಕೊಡವ ನೃತ್ಯ ,ಟಿಬೇಟಿಯನ್ ನೃತ್ಯ ಹಾಗೂ ಕೇರಳ ಚೆಂಡೆ ಸೇರಿದಂತೆ ಇನ್ನಿತರ ಕಲಾತಂಡಗಳ ಪ್ರದರ್ಶನ ಸೇರಿದಂತೆ ಪ್ರವಾಸಿಗರ ಗಮನ ಸೆಳೆಯುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

ಮೆರವಣಿಗೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶಾಂತಿಯ ಸಂಕೇತವಾದ ಬಿಳಿ ವಸ್ತ್ರವನ್ನು ಧರಿಸಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾತಂಡಗಳು ಹಾಗೂ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮತ್ತು ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ .ಸಿ ಮಹದೇವಪ್ಪನವರು ಅನಾವರಣಗೊಳಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಸುಬ್ರಮಣ್ಯ, ಕರ್ನಾಟಕ ದಸರಾ ವಸ್ತುಪ್ರದರ್ಶನದ ಕಾರ್ಯನಿರ್ವಹಣಾಧಿಕಾರಿ ರುದ್ರೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ. ಕೆ ಹರೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್, ಮೈಸೂರು ಟ್ರಾವಲ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಜಯಪ್ರಕಾಶ್‌ ರಾಜೇ ಅರಸ್‌, ಸ್ಕಾಲ್‌ ಇಂಟರ್‌ನ್ಯಾಷನಲ್‌ ಮೈಸೂರು ವಿಭಾಗದ ಅಧ್ಯಕ್ಷ ಬಿ.ಎಸ್.ಪ್ರಶಾಂತ್‌, ಟೂರಿಸ್ಟ್‌ ಗೈಡ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಎಸ್.ಜೆ.ಅಶೋಕ್‌, ಚಾಲಕರ ಸಂಘದ ಅಧ್ಯಕ್ಷರಾದ ನಾಗರಾಜು, ಡಿ.ದೇವರಾಜು ಅರಸು ರಸ್ತೆ ಅಂಗಡಿ ಮಾಲೀಕರ ಹಾಗೂ ಬಾಡಿಗೆದಾರರು ಸಂಘದ ಅಧ್ಯಕ್ಷರಾದ ಪ್ರಕಾಶ್ ಕೆ.ಜಿ. , ಹೋಟೆಲ್ ಜೇಡ್ ಗಾರ್ಡ್ ನ್ ಭರತ್ ಗೌಡ, ಅರೋಹಿ ಹೋಟೆಲ್ ನ ಸಮರ್ಥ್ ವೈದ್ಯ ಸೇರಿದಂತೆ ಇತರರು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

3 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

3 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

3 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

3 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

3 hours ago