Mysore
24
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ ಮನೆಗೆ ಅಂಚೆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಜೀವನ ಚರಿತ್ರೆ ಪುಸ್ತಕ ಪೋಸ್ಟ್: ಕಾರಣ ಇಷ್ಟೇ

cm post nalwadi bio

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತಲೂ ಸಿಎಂ ಸಿದ್ದರಾಮಯ್ಯ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.‌

ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ದಿನೇಶ್ ಗೌಡ ಎಂಬುವವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಚರಿತ್ರೆ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಯತೀಂದ್ರ ಮನೆಗೆ ಪೋಸ್ಟ್ ಮಾಡಿದ್ದಾರೆ. ಮೈಸೂರಿನ ಲಷ್ಕರ್ ವೃತ್ತದಲ್ಲಿರುವ ಮೇನ್ ಪೋಸ್ಟ್ ಆಫೀಸ್ ಮೂಲಕ ಪುಸ್ತಕವನ್ನು ಪೋಸ್ಟ್ ಮಾಡಲಾಗಿದ್ದು, ಇದನ್ನು ಓದಿಯಾದರೂ ಯತೀಂದ್ರ ನಾಲ್ವಡಿ ಅವರ ಸಾಧನೆ ಬಗ್ಗೆ ತಿಳಿದುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ನೆನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತೀಂದ್ರ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಮಾತಿಗೆ ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಹೇಳಿದ್ದರು.

Tags:
error: Content is protected !!