cm post nalwadi bio
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತಲೂ ಸಿಎಂ ಸಿದ್ದರಾಮಯ್ಯ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ದಿನೇಶ್ ಗೌಡ ಎಂಬುವವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಚರಿತ್ರೆ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಯತೀಂದ್ರ ಮನೆಗೆ ಪೋಸ್ಟ್ ಮಾಡಿದ್ದಾರೆ. ಮೈಸೂರಿನ ಲಷ್ಕರ್ ವೃತ್ತದಲ್ಲಿರುವ ಮೇನ್ ಪೋಸ್ಟ್ ಆಫೀಸ್ ಮೂಲಕ ಪುಸ್ತಕವನ್ನು ಪೋಸ್ಟ್ ಮಾಡಲಾಗಿದ್ದು, ಇದನ್ನು ಓದಿಯಾದರೂ ಯತೀಂದ್ರ ನಾಲ್ವಡಿ ಅವರ ಸಾಧನೆ ಬಗ್ಗೆ ತಿಳಿದುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ಇನ್ನು ಇದಕ್ಕೆ ಸಂಬಂಧಿಸಿದಂತೆ ನೆನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತೀಂದ್ರ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಮಾತಿಗೆ ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಹೇಳಿದ್ದರು.
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…