ಮೈಸೂರು ನಗರ

ಕೇಂದ್ರ ಸಚಿವ ವಿ.ಸೋಮಣ್ಣರನ್ನು ಭೇಟಿ ಮಾಡಿದ ಶಾಸಕ ದರ್ಶನ್‌ ಧ್ರುವನಾರಾಯಣ್‌

ಮೈಸೂರು: ಮೈಸೂರಿನಲ್ಲಿಂದು ಕೇಂದ್ರ ಸಚಿವ ವಿ.ಸೋಮಣ್ಣರನ್ನು ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು ಭೇಟಿ ಮಾಡಿ ರೈಲ್ವೆ ಇಲಾಖೆ ಸಂಬಂಧ ಹಲವಾರು ವಿಷಯಗಳನ್ನು ಚರ್ಚೆ ನಡೆಸಿದ್ದಾರೆ.

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ದೊಡ್ಡ ಕವಲಂದೆ ರೈಲ್ವೆ ಗೇಟ್ ನಲ್ಲಿ ಸುಮಾರು 45 ನಿಮಿಷಗಳ ಕಾಲ ರೈಲ್ವೆ ಗೇಟ್ ಹಾಕುತ್ತಿರುವುದರಿಂದ ಅಲ್ಲಿನ ಜನಸಾಮಾನ್ಯರಿಗೆ ಹೆಚ್ಚು ಸಮಸ್ಯೆಯಾಗುತ್ತಿತ್ತು. ಇದನ್ನು ಮನಗಂಡ ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು, ನಿನ್ನೆ ದೊಡ್ಡ ಕವಲಂದೆ ರೈಲ್ವೆ ಗೇಟ್ ಬಳಿ ಭೇಟಿ ನೀಡಿ ವೀಕ್ಷಿಸಿದರು. ಈ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಇಂದು ಮೈಸೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ವಿ.ಸೋಮಣ್ಣರನ್ನು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ದೊಡ್ಡ ಕವಲಂದೆ ರೈಲ್ವೆ ಗೇಟ್ 45 ನಿಮಿಷ ಹಾಕುವುದನ್ನು 15 ನಿಮಿಷಕ್ಕೆ ಇಳಿಸಬೇಕು. ನಮ್ಮ ನಂಜನಗೂಡು ತಾಲ್ಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ರೈಲ್ವೆ ಮೇಲು ಸೇತುವೆ ಕಾಮಗಾರಿ ಮಾಡಿಕೊಡಬೇಕು. ನಂಜನಗೂಡು ನಗರ ರಾಷ್ಟ್ರಪತಿ ರಸ್ತೆ ( RP ರೋಡ್ ) ಭಾರ್ಗವಿ ಚಿತ್ರಮಂದಿರ ಸಮೀಪ ರೈಲ್ವೆ ಮೇಲುಸೇತುವೆ ಮಾಡಿಕೊಡುವ ಬಗ್ಗೆ ಸಚಿವರಿಗೆ ಮನವಿ ಮಾಡಲಾಯಿತು. ಇನ್ನು ನಂಜನಗೂಡು ನಗರದ ಅಂಚೆ ಕಚೇರಿಯಿಂದ ಎರಡು ಬದಿಯಲ್ಲಿ ರೈಲ್ವೆ ಫುಟ್ ಬ್ರಿಡ್ಜ್ ಮತ್ತು ಬ್ಯಾರಿಕೇಡ್ ಅಳವಡಿಸುವ ಬಗ್ಗೆ ಮನವಿ ಮಾಡಿದ್ದು, ಈ ಎಲ್ಲಾ ಮನವಿಗಳಿಗೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ದರ್ಶನ್‌ ಧ್ರುವನಾರಾಯಣ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

4 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

4 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

5 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

5 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

6 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

14 hours ago