ಮೈಸೂರು: ನಗರದ ಚಲನಚಿತ್ರ ಮಂದಿರವೊಂದರಲಿ ಕೆಲ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಪ್ರಸಂಗಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಮವಾರ(ಜು.22) ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಪವಿತ್ರ ಭೂಮಿ ಮತ್ತು ಜನ್ಮಭೂಮಿ ಒಂದೇ ಅಂತ ಭಾವನೆ ಇರುವುದಿಲ್ಲವೇ, ಮದರ್ ಲ್ಯಾಂಡ್ ಹಾಗೂ ಹೋಲಿ ಲ್ಯಾಂಡ್ ಕೂಡ ಇದೇನೇ ಎಂಬ ಭಾವನೆ ಇರುವುದಿಲ್ಲವೋ ಅಂಥವರಿಂದ ಈ ಹೋಲಿಕೆ ಆಗುತ್ತದೆ. ಹೋಲಿಲ್ಯಾಂಡ್ ಅರಬ್‌ನಲ್ಲಿ ಇದೆ ಎಂದು ಯಾರೋ ಭಾವಿಸುತ್ತಾರೋ ಅವರಿಂದ ಇಂತಹ ಸಮಸ್ಯೆಯಾಗುತ್ತದೆ ಎಂದು ಖಾರವಾಗಿ ಹೇಳಿದರು.
ಈ ಘಟನೆ ನಡೆದಾಗ ಚಿತ್ರಮಂದಿರದಲ್ಲಿದ್ದವರು ಅಂತವರಿಗೆ ಕಿವಿ ಹಿಂಡುವ ಕೆಲಸ ಮಾಡಬೇಕಿತ್ತು. ಆದರೆ ಯಾರು ಕೂಡ ಆ ಕೆಲಸ ಮಾಡಿಲ್ಲ. ಇನ್ನು ಮುಂದಾದರೂ ಈ ರೀತಿ ಆಗದಂತೆ ನೋಡಿಕೊಳ್ಳಬೇಕಿದೆ ಎಂದರು.
ಏನಿದು ಘಟನೆ?
ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್.ಸಿ ಚಿತ್ರಮಂದಿರದಲ್ಲಿ, ನಿನ್ನೆ ರಾತ್ರಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು ಹಾಗಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.
ಹೀಗಾಗಿ ಜಯಲಕ್ಷ್ಮೀಪುರಂ ಇನ್ಸ್ ಪೆಕ್ಟ್ರ್ ಕುಮಾರ್ ನೇತೃತ್ವದಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇಂದು ಪೊಲೀಸರು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದ ಪೊಲೀಸರು, ಬಳಿಕ ಚಿತ್ರಮಂದಿರ ಮಾಲೀಕರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…