Mysore
15
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆ: ಮೈಸೂರಿನ ಸ್ಪೋರ್ಟ್ಸ್ ಪಾರ್ಕ್‌ನ ದಿಯಾ ಭೀಮಯ್ಯಗೆ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ.

ಮೈಸೂರು: ಇದೇ ತಿಂಗಳ 20ರಿಂದ 25ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆದ 36ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಬೆಳ್ಳಿ ಪದಕ ಗಳಿಸಿದ್ದಾರೆ.

ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾದ ದಿಯಾ ಅವರು 17 ವರ್ಷದೊಳಗಿನ ಸಿಂಗಲ್ಸ್, ಡಬಲ್ಸ್ ಹಾಗು ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.

ಇವರು ಡಬಲ್ಸ್ ನಲ್ಲಿ ತಮಿಳುನಾಡಿನ ವರ್ನಾ ಪಿ ಅವರೊಂದಿಗೆ ಕೂಡಿ ಆಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಿಶ್ರ ಡಬಲ್ಸ್ ನಲ್ಲಿ ಮೈಸೂರಿನ ಅಮಿತ್ ರಾಜ್ ನಟರಾಜ್ ಜೊತೆ ಕೂಡಿ ಆಡಿ ತೃತೀಯ ಸ್ಥಾನ ಗಳಿಸಿದ್ದು, ಸಿಂಗಲ್ಸ್ ನಲ್ಲಿ ಪ್ರಥಮ ಶ್ರೇಯಾಂಕಿತ ಮತ್ತು ಚಾಂಪಿಯನ್ ಆಗಿ ಹೊರ ಹೊಮ್ಮಿದ ಒಡಿಸದ ತಾನ್ವಿ ಪತ್ರಿ ಅವರಿಂದ ಕ್ವಾಟರ್ ಫೈನಲ್ ನಲ್ಲಿ ಪರಾಭವ ಹೊಂದಿದರು.

ಭಾಗವಹಿಸಿದ ಮೂರು ವಿಭಾಗದಲ್ಲಿ ಶ್ಲಾಘನೀಯ ಫಲಿತಾಂಶ ತಂದ ಇವರು ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬೊಪ್ಪಂಡ ಭೀಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಹುಟ್ಟೂರು ಮಡಿಕೇರಿಯಾಗಿದ್ದು, ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯರ ಹೆಮ್ಮೆಯ ಪುತ್ರಿಯಾಗಿದ್ದಾರೆ.

Tags:
error: Content is protected !!