ಮೈಸೂರು: ಇದೇ ತಿಂಗಳ 20ರಿಂದ 25ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆದ 36ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಬೆಳ್ಳಿ ಪದಕ ಗಳಿಸಿದ್ದಾರೆ.
ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾದ ದಿಯಾ ಅವರು 17 ವರ್ಷದೊಳಗಿನ ಸಿಂಗಲ್ಸ್, ಡಬಲ್ಸ್ ಹಾಗು ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.
ಇವರು ಡಬಲ್ಸ್ ನಲ್ಲಿ ತಮಿಳುನಾಡಿನ ವರ್ನಾ ಪಿ ಅವರೊಂದಿಗೆ ಕೂಡಿ ಆಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಿಶ್ರ ಡಬಲ್ಸ್ ನಲ್ಲಿ ಮೈಸೂರಿನ ಅಮಿತ್ ರಾಜ್ ನಟರಾಜ್ ಜೊತೆ ಕೂಡಿ ಆಡಿ ತೃತೀಯ ಸ್ಥಾನ ಗಳಿಸಿದ್ದು, ಸಿಂಗಲ್ಸ್ ನಲ್ಲಿ ಪ್ರಥಮ ಶ್ರೇಯಾಂಕಿತ ಮತ್ತು ಚಾಂಪಿಯನ್ ಆಗಿ ಹೊರ ಹೊಮ್ಮಿದ ಒಡಿಸದ ತಾನ್ವಿ ಪತ್ರಿ ಅವರಿಂದ ಕ್ವಾಟರ್ ಫೈನಲ್ ನಲ್ಲಿ ಪರಾಭವ ಹೊಂದಿದರು.
ಭಾಗವಹಿಸಿದ ಮೂರು ವಿಭಾಗದಲ್ಲಿ ಶ್ಲಾಘನೀಯ ಫಲಿತಾಂಶ ತಂದ ಇವರು ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬೊಪ್ಪಂಡ ಭೀಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಹುಟ್ಟೂರು ಮಡಿಕೇರಿಯಾಗಿದ್ದು, ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯರ ಹೆಮ್ಮೆಯ ಪುತ್ರಿಯಾಗಿದ್ದಾರೆ.
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…