ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಇನ್ನೆರಡು ದಿನಗಳಲ್ಲಿ ಮೈಸೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರ್ಗಿಯಿಂದ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು, ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು.
ಇದನ್ನು ಓದಿ: ಮೈಸೂರು ದಸರಾಗೆ ಗೊಂಬೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ
ಬುಧವಾರ ಚಾಮುಂಡೇಶ್ವರಿ ದೇವಸ್ಥಾನದ ತೆಪ್ಪೋತ್ಸವ ಮುಗಿಸಿ ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಹಿಂದನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದರೆ ಬೆಳಿಗ್ಗೆ ಎಲ್ಲರೂ ಎದ್ದಾಗ ಬಾಲಕಿ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂತ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ತನಿಖೆ ಕೈಗೊಂಡ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕುಷವಾಗಿ ಮಾಹಿತಿ ತಿಳಿಯಲು ಇನ್ನೆರಡು ದಿನಗಳಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಭೇಟಿ ನೀಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರಿನಲ್ಲಿ ಕೃತ್ಯ ನಡೆದ ಸ್ಥಳ ಪರಿಶೀಲನೆ ನಡೆಸುವ ತಂಡವು, ಕಲಬುರ್ಗಿಯಲ್ಲಿ ವಾಸವಿರುವ ಮೃತ ಬಾಲಕಿಯ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದೆ.





