ಮೈಸೂರು ನಗರ

ರಾಷ್ಟ್ರೀಯ ಲೋಕ್‌ ಅದಾಲತ್‌: 7,268 ಪಕ್ರರಣಗಳು ಇತ್ಯರ್ಥ

ಮೈಸೂರು: ರಾಜ್ಯಾದ್ಯಾಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ 7,268 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್‌ ಅದಾಲತ್‌ ಮೂಲಕ ಇತ್ಯರ್ಥ ಪಡಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ರಾಷ್ಟ್ರೀಯ ಲೋಕ್‌ ಅದಾಲತ್‌ ಹಮ್ಮಿಕೊಳ್ಳಲಾಗಿತ್ತು.

ನಗರ ಮತ್ತು ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಒಟ್ಟು 1,22,125 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದವು. ಅವುಗಳ ಪೈಕಿ 21,646 ಪ್ರಕರಣಗಳನ್ನು ಮಾತ್ರ ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ 7,268 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ.

ಈ ಬಾರಿ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 41 ದಂಪತಿಗಳು ತಮ್ಮ ಮಧ್ಯದ ವ್ಯಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿದ್ದಾರೆ.

ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನದ ಮೂಲಕ ಒಟ್ಟು ರೂ.49,66,29,267 ಗಳು ಇತ್ಯರ್ಥವಾಗಿವೆ. ಈ ಯಶಸ್ಸಿಗೆ ಸಹಕರಿಸಿದ ಎಲ್ಲಾ ವಕೀಲರು ಹಾಗೂ ಕಕ್ಷಿಗಾರರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago