ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ.
ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವಿವೇಕ ನಡಿಗೆಯಲ್ಲಿ (ವಾಕಥಾನ್) ಭಾಗವಹಿಸಿ, ಯುವ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಸಿಡಿಲ ಸನ್ಯಾಸಿ, ಭವ್ಯ ಭಾರತ ನಿರ್ಮಾಣದ ಸಂಕಲ್ಪ ತೊಟ್ಟ ಅದಮ್ಯ ಚೇತನ ವ್ಯಕ್ತಿಯಾಗಿದ್ದರು. ಅವರ ಹುಟ್ಟು ಹಬ್ಬದ ದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತತ್ವಗಳನ್ನು ಇಂದಿನ ಯುವ ಜನತೆ ಅಳವಡಿಸಿಕೊಂಡು ಅವುಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…