ಮೈಸೂರು ನಗರ

ರಾಷ್ಟ್ರೀಯ ಯುವ ದಿನ: ವಾಕಥಾನ್‌ನಲ್ಲಿ ಭಾಗಿಯಾದ ಸಂಸದ ಯದುವೀರ್‌

ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ.

ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವಿವೇಕ ನಡಿಗೆಯಲ್ಲಿ (ವಾಕಥಾನ್‌) ಭಾಗವಹಿಸಿ, ಯುವ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಸಿಡಿಲ ಸನ್ಯಾಸಿ, ಭವ್ಯ ಭಾರತ ನಿರ್ಮಾಣದ ಸಂಕಲ್ಪ ತೊಟ್ಟ ಅದಮ್ಯ ಚೇತನ ವ್ಯಕ್ತಿಯಾಗಿದ್ದರು. ಅವರ ಹುಟ್ಟು ಹಬ್ಬದ ದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತತ್ವಗಳನ್ನು ಇಂದಿನ ಯುವ ಜನತೆ ಅಳವಡಿಸಿಕೊಂಡು ಅವುಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

1 hour ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

7 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

7 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

8 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

9 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

15 hours ago