Mysore
20
broken clouds

Social Media

ಶುಕ್ರವಾರ, 30 ಜನವರಿ 2026
Light
Dark

ಹೊಸದಾಗಿ ದೇವರಾಜ ಮಾರುಕಟ್ಟೆ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಮೈಸೂರು: ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಬಿಲ್ಡಿಂಗ್ ನೆಲಸಮ ಮಾಡಿ ಇವೆರಡನ್ನು ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿವಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ಮೈಸೂರಿನ ದೇವರಾಜ ಮಾರುಕಟ್ಟೆ ಹಾಗೂ ಲಾನ್ಸ್ ಡೌನ್, ಬಿಲ್ಡಿಂಗ್ ಡೆಮೋಲಿಶ್‌ ಮಾಡಿ ಹೊಸದಾಗಿ ಕಟ್ಟುತ್ತೇವೆ. ಸಮಯ ನಿಗದಿಯೊಳಗೆ ಈ ಕೆಲಸ ಮಾಡುತ್ತೇವೆ. ದೇವರಾಜ ಮಾರುಕಟ್ಟೆಯಲ್ಲಿರುವವರನ್ನು ಒಕ್ಕಲೆಬ್ಬಿಸುವುದಿಲ್ಲ. ಹೊಸದಾಗಿ ಕಟ್ಟಿ ಅವರಿಗೆ ಮೊದಲ ಆದ್ಯತೆ ನೀಡುತ್ತೇವೆ. ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಈ ಹೊಸ ಕಟ್ಟಡ ನಿರ್ಮಾಣಕ್ಕೆ 100 ಕೋಟಿ ಹಣಯಿದೆ. ಆದ್ದರಿಂದ ಶೀಘ್ರದಲ್ಲೇ ಇವುಗಳನ್ನು ನಿರ್ಮಾಣ ಮಾಡುತ್ತೇವೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರಿನ ಕೆಲವು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಈ ಬಗ್ಗೆ ರಿಪೋರ್ಟ್ ಸಲ್ಲಿಸಿದ್ದೇವೆ. ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಕಟ್ಟಡ ನಿರ್ಮಾಣದ ಬಳಿಕ ಮೊದಲು ವ್ಯಾಪಾರ ಮಾಡುತ್ತಿದ್ದವರಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಭರವಸೆ ನೀಡಿದರು.

 

Tags:
error: Content is protected !!