ಮೈಸೂರು: ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಬಿಲ್ಡಿಂಗ್ ನೆಲಸಮ ಮಾಡಿ ಇವೆರಡನ್ನು ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ಈ ಕುರಿತು ಮೈಸೂರಿನ ಚಾಮುಂಡಿವಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಭೈರತಿ ಸುರೇಶ್ ಅವರು, ಮೈಸೂರಿನ ದೇವರಾಜ ಮಾರುಕಟ್ಟೆ ಹಾಗೂ ಲಾನ್ಸ್ ಡೌನ್, ಬಿಲ್ಡಿಂಗ್ ಡೆಮೋಲಿಶ್ ಮಾಡಿ ಹೊಸದಾಗಿ ಕಟ್ಟುತ್ತೇವೆ. ಸಮಯ ನಿಗದಿಯೊಳಗೆ ಈ ಕೆಲಸ ಮಾಡುತ್ತೇವೆ. ದೇವರಾಜ ಮಾರುಕಟ್ಟೆಯಲ್ಲಿರುವವರನ್ನು ಒಕ್ಕಲೆಬ್ಬಿಸುವುದಿಲ್ಲ. ಹೊಸದಾಗಿ ಕಟ್ಟಿ ಅವರಿಗೆ ಮೊದಲ ಆದ್ಯತೆ ನೀಡುತ್ತೇವೆ. ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಈ ಹೊಸ ಕಟ್ಟಡ ನಿರ್ಮಾಣಕ್ಕೆ 100 ಕೋಟಿ ಹಣಯಿದೆ. ಆದ್ದರಿಂದ ಶೀಘ್ರದಲ್ಲೇ ಇವುಗಳನ್ನು ನಿರ್ಮಾಣ ಮಾಡುತ್ತೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರಿನ ಕೆಲವು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಈ ಬಗ್ಗೆ ರಿಪೋರ್ಟ್ ಸಲ್ಲಿಸಿದ್ದೇವೆ. ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಕಟ್ಟಡ ನಿರ್ಮಾಣದ ಬಳಿಕ ಮೊದಲು ವ್ಯಾಪಾರ ಮಾಡುತ್ತಿದ್ದವರಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…