ಮೈಸೂರು ನಗರ

ಮೈಸೂರು ರೈಲ್ವೆ ವೇಳಾ ಪಟ್ಟಿಯಲ್ಲಿ ನೂತನ ಪರಿಷ್ಕರಣೆ: 2025ರ ಜನವರಿ 1 ರಿಂದ ಜಾರಿ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯೂ ಹೊಸ ವರ್ಷದ ಆರಂಭದ ಬೆನ್ನಲ್ಲೇ, ತನ್ನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಮೈಸೂರಿನಿಂದ ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಹಾಗೂ ಆಗಮಿಸುವ ಸಮಯವನ್ನು ಪರಿಷ್ಕರಿಸಲಾಗಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 2025ರ ಜನವರಿ 1 ರಿಂದ ಈ ನಿಯಮವೂ ಜಾರಿಯಾಗಲಿದ್ದು, ಮೈಸೂರಿನ ಎಲ್ಲಾ ಪ್ರಯಾಣಿಕರು, ರೈಲು ಪ್ರಯಾಣವನ್ನು ಆರಂಭಿಸುವ ಮುನ್ನ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ಲಿಂಕ್‌ನ ಸಹಾಯದಿಂದ ಹೊಸ ರೈಲು ವೇಳಾಪಟ್ಟಿಯನ್ನು ದಯಮಾಡಿ ಪರಿಶೀಲಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

2025ರ ಜನವರಿ 1 ರಿಂದ ಮೈಸೂರು ಮತ್ತು ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಮತ್ತು ಆಗಮಿಸುವ ಪರಿಷ್ಕೃತ ಸಮಯವನ್ನು ಹೊಂದಿರುವ ರೈಲುಗಳ ಪಟ್ಟಿ ಈ ರೀತಿ ಇದೆ:

1. ಮೈಸೂರಿನಿಂದ ಸಾಯಿನಗರ ಶಿರಡಿಗೆ ಹೊರಡುವ ರೈಲು ಸಂಖ್ಯೆ 16217 ದಿನಾಂಕ 06.01.2025 ರಿಂದ ಬೆಳಿಗ್ಗೆ 05:00 ಗಂಟೆಗೆ ಮೈಸೂರಿನಿಂದ ಹೊರಡಲಿದೆ.

2.ಟುಟಿಕೋರಿನ್‌ (ತೂತುಕುಡಿ)ನಿಂದ ಮೈಸೂರಿಗೆ ಹೊರಡುವ ರೈಲು ನಂ.16235 ಪಾಂಡವಪುರ ನಿಲ್ದಾಣಕ್ಕೆ 08:39 ಗಂಟೆಗೆ ತಲುಪುತ್ತದೆ. 08:40 ಗಂಟೆಗೆ ಹೊರಟು ಅಂತಿಮವಾಗಿ 09:30 ಗಂಟೆಗೆ ಮೈಸೂರು ತಲುಪುತ್ತದೆ.

3.ನಂಜನಗೂಡಿನಿಂದ ಮೈಸೂರಿಗೆ ಹೊರಡುವ ರೈಲು ನಂ.06299 ನಂಜನಗೂಡಿನಿಂದ 10:25 ಗಂಟೆಗೆ ಹೊರಟು 11:15 ಗಂಟೆಗೆ ಮೈಸೂರು ತಲುಪಲಿದೆ. ಮಾರ್ಗದಲ್ಲಿ ರೈಲು ಸುಜಾತಪುರಂ ಹಾಲ್ಟ್ ನಲ್ಲಿ 10:25ರಿಂದ 10.29 ಗಂಟೆಗೆ ತಾಂಡವಪುರ ಹಾಲ್ಟ್ 10:32 ರಿಂದ 10:33 ಗಂಟೆಗೆ, ಕಡಕೋಳ 10:38 – 10 ರಿಂದ 39 ಗಂಟೆಗೆ, ಅಶೋಕಪುರಂ , 10:48 ರಿಂದ 10:49 ಗಂಟೆಗೆ, ಚಾಮರಾಜಪುರಂ ನಿಲ್ದಾಣದಲ್ಲಿ 10:54 ರಿಂದ 10:55 ಆಗಮಿಸುತ್ತದೆ – ನಿರ್ಗಮಿಸುತ್ತದೆ.

4.ಮೈಸೂರಿನಿಂದ ನಂಜನಗೂಡಿಗೆ ಹೊರಡುವ ಪ್ಯಾಸೆಂಜರ್ ರೈಲು ನಂ.06300 ನಂಜನಗೂಡಿಗೆ 10:00 ಗಂಟೆಗೆ ತಲುಪಲಿದೆ.

5.ಮೈಸೂರಿನಿಂದ ಚಾಮರಾಜನಗರಕ್ಕೆ ಹೋಗುವ ಪ್ಯಾಸೆಂಜರ್ ರೈಲು ನಂ.60276 ಮೈಸೂರಿನಿಂದ 11:45 ಗಂಟೆಗೆ ನಿರ್ಗಮಿಸುತ್ತದೆ ಮತ್ತು ಚಾಮರಾಜನಗರಕ್ಕೆ 13:30 ಗಂಟೆಗೆ ತಲುಪುತ್ತದೆ. ಮಾರ್ಗದಲ್ಲಿ ರೈಲು ಚಾಮರಾಜಪುರಂನಲ್ಲಿ 11:50-11:51, ಅಶೋಕಪುರಂ 11:56-11:55, ಕಡಕೋಳ 12:08-12:09, ತಾಂಡವಪುರ ಹಾಲ್ಟ್ 12:14-12:15, ಸುಜಾತಪುರಂ ಹಾಲ್ಟ್ 12:18-12:19, ನಂಜನಗೂಡು ಟೌನ್ 12:23-12:25, ಚಿನ್ನದಗುಡಿ ಹುಂಡಿ ಹಾಲ್ಟ್ 12:35-12:36, ನರಸಾಂಬುಧಿ ಹಾಲ್ಟ್ 12:38-12:39, ಕವಲಂದೆ ಹಾಲ್ಟ್ 12:44-12:45, ಕೊಣ್ಣನೂರು ಹಾಲ್ಟ್ 12:50-12:51, ಬದನಗುಪ್ಪೆ ಹಾಲ್ಟ್ 12:56-12:57, ಮರಿಯಾಲ ಹಾಲ್ಟ್ 13:03-13:04 ಗಂಟೆಗೆ ಆಗಮಿಸುತ್ತದೆ – ನಿರ್ಗಮಿಸುತ್ತದೆ.

6.ಚಾಮರಾಜನಗರದಿಂದ ಮೈಸೂರಿಗೆ ಹೊಗುವ ಪ್ಯಾಸೆಂಜರ್ ರೈಲು ನಂ.06234 ಅಶೋಕಪುರಂಗೆ 11:53 ಕ್ಕೆ ತಲುಪುತ್ತದೆ ಮತ್ತು 11:55 ಕ್ಕೆ ನಿರ್ಗಮಿಸುತ್ತದೆ ಹಾಗು ಚಾಮರಾಜಪುರಂಗೆ 12:01 ಕ್ಕೆ ಆಗಮಿಸಿ 12:02 ಕ್ಕೆ ನಿರ್ಗಮಿಸುತ್ತದೆ.

7.ಚಾಮರಾಜನಗರದಿಂದ ತುಮಕೂರು ಪ್ಯಾಸೆಂಜರ್ ರೈಲು ನಂ.07345 ಚಿನ್ನದಗುಡಿ ಹುಂಡಿಯಲ್ಲಿ 07:51- 07:52, ನಂಜನಗೂಡು ಟೌನ್ 08:02-08:04, ಸುಜಾತಪುರಂ ಹಾಲ್ಟ್ 08:08 – 08:09, ತಾಂಡವಪುರ ಹಾಲ್ಟ್ 08:13 – 08:14, ಕಡಕೋಳ 08:19-08:20, ಅಶೋಕಪುರಂ 08:33-08:34 ಮತ್ತು ಚಾಮರಾಜಪುರಂ 08:39-08:40 ಗಂಟೆಗೆ ತಲುತ್ತದೆ ಎಂದು ರೈಲ್ವೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಅರ್ಚನ ಎಸ್‌ ಎಸ್

Recent Posts

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

11 mins ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

2 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

2 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

3 hours ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

3 hours ago