ಮೈಸೂರು ನಗರ

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.

ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ನಿರ್ಮಿಸಿರುವ ಈ ಪ್ರತಿಮೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಹಿಂದೆ ಇದೇ ಸ್ಥಳದಲ್ಲಿ ಸ್ಥಾಪಿಸಲಾಗಿದ್ದ ದೇವರಾಜ ಅರಸು ಅವರ ಪ್ರತಿಮೆ ಕುರಿತು ಆಕ್ಷೇಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಹೊಸ ಪ್ರತಿಮೆ ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಹೆಸರಾಂತ ಶಿಲ್ಪಿಗಳಲ್ಲಿ ಒಬ್ಬರಾದ ಅರುಣ್‌ ಯೋಗಿರಾಜ್‌ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು.

ಅವರು ರೂಪಿಸಿರುವ ನೂತನ ಪ್ರತಿಮೆ ದೇವರಾಜ ಅರಸು ಅವರ ಮೂಲ ವ್ಯಕ್ತಿತ್ವ, ಮುಖಭಾವ, ಉಡುಗೆ ಹಾಗೂ ಗಾಂಭೀರ್ಯವನ್ನು ಅತ್ಯಂತ ನೈಜವಾಗಿ ಮೂಡಿಸಿರುವುದರಿಂದ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

31 mins ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

33 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

35 mins ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

37 mins ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

43 mins ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

48 mins ago