ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ.
ಹೊಸ ವರ್ಷದ ಅಂಗವಾಗಿ ಇಂದು ತಾಯಿ ಚಾಮುಂಡೇಶ್ವರಿಗೆ ಹಾಗೂ ಇಡೀ ದೇವಾಲಯಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ.
ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು.
ಜನರ ದಟ್ಟಣೆಯನ್ನು ನಿಯಂತ್ರಿಸಲು ಆಡಳಿತ ಮಂಡಳಿಯು ಬ್ಯಾರಿಕೇಡ್‌ಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ಗರ್ಭಗುಡಿಗೆ ಹೋಗಲು ಸಾಧ್ಯವಾದ ಭಕ್ತರಗೆ ಹೊರಗಡೆ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದ್ದು, ನೇರ ಪ್ರಸಾರದಲ್ಲಿ ದೇವಿಯ ಪೂಜಾ ಕೈಂಖರ್ಯಗಳನ್ನು ವೀಕ್ಷಣೆ ಮಾಡಬಹುದಾಗಿದೆ.




