ಮೈಸೂರು: ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಜನಸಾಗರವೇ ಹರಿದು ಬರುತ್ತಿದೆ.
ನೂತನ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಹೊಸ ವರ್ಷದ ಸ್ವಾಗತದ ಸಂದರ್ಭದಲ್ಲಿ ಎಲ್ಲಾ ಜನತೆ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವುದು ಸಹಜ. ಅದರಂತೆ ಈ ಸಮಯದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಹಾಗೂ ಜನತೆ ಶ್ರೀಕ್ಷೇತ್ರಗಳಿಗೆ ಹೆಚ್ಚು ಹೆಚ್ಚು ಭೇಟಿ ನೀಡುತ್ತಾರೆ.
ಅದರಲ್ಲೂ ಹೊಸ ವರ್ಷದ ಮೊದಲ ದಿನ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲು ಸಹಸ್ರಾರು ಸಾರ್ವಜನಿಕರು ಬೆಟ್ಟಕ್ಕೆ ಭೇಟಿ ನೀಡಿರುವುದು ವಿಶೇಷ.
ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಸಾರ್ವಜನಿಕರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಇನ್ನು ಬೆಟ್ಟದಲ್ಲಿ ಹೆಚ್ಚಿನ ಜನರು ಭೇಟಿ ನೀಡಿರುವ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.





