ಮೈಸೂರು ನಗರ

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ ಮೈಸೂರಿಗರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡರು.

ಅರಮನೆ ಮಂಡಳಿ ವತಿಯಿಂದ ಬಣ್ಣಗಳ ಚಿತ್ತಾರಗಳಿಂದ ಕೂಡಿದ ಶಬ್ಧರಹಿತ ಹಸಿರು ಪಟಾಕಿ ಸಿಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆ ಮೂಲಕ ಪ್ರವಾಸಿಗರು, ಮೈಸೂರಿಗರು ಅರಮನೆ ಮುಂಭಾಗದಲ್ಲಿ ಪಟಾಕಿ ಸಿಡಿತದ ಸಡಗರದ ನಡುವೆ ಹೊಸ ವರ್ಷವನ್ನು ಬರಮಾಡಿಕೊಂಡರು.

ಇನ್ನು ರಸ್ತೆ ರಸ್ತೆಗಳಲ್ಲಿ ಡ್ಯಾನ್ಸ್‌ ಮಾಡುತ್ತಾ, ಶಿಳ್ಳೆ, ಚಪ್ಪಾಳೆ ಹಾಕುತ್ತಾ ಯುವಕರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡರು.

ರಸ್ತೆ ರಸ್ತೆಗಳಲ್ಲೇ ಕೇಕ್‌ ಕತ್ತರಿಸಿ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

2 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

3 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

4 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

4 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

4 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

4 hours ago