ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ.
ಜಗತ್ಪ್ರಸಿದ್ಧ ಮೈಸೂರು ಅರಮನೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದು, ಹಳೆಯ ಘಟನೆಗಳನ್ನು ಮರೆತು ಹೊಸ ಹೊಸ ಆಲೋಚನೆಗಳ ಜೊತೆಗೆ 2026ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ.
ಅರಮನೆ ಮುಂದೆ ಫ್ಯಾಮಿಲಿ ಜೊತೆ ಸೆಲ್ಫಿ ತೆಗೆದುಕೊಂಡು ಎಂಜಾಯ್ ಮಾಡುತ್ತಿರುವ ಪ್ರವಾಸಿಗರು, ಇಂದು ಮೈಸೂರಿನಲ್ಲೇ ಹೊಸ ವರ್ಷಾಚರಣೆ ಮಾಡಲು ತಯಾರಿ ನಡೆಸುತ್ತಿದ್ದಾರೆ.
ಇನ್ನು ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ನೆಚ್ಚಿನ ಪ್ರಾಣಿಗಳನ್ನು ನೋಡಿ ಜನತೆ ಫುಲ್ ಖುಷ್ ಆಗಿದ್ದಾರೆ.





