ಮೈಸೂರು ನಗರ

ಪತ್ರಿಕಾ ವಿತರಕರು, ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು.

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕೆಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಸುತ್ತೂರು ಶ್ರೀ ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷರಾದ ಶಂಬುಲಿಂಗ ಅವರು ಸೇರಿ ಹಲವು ಮಹನೀಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago