ಮೈಸೂರು: ಮುಂದಿನ 30 ವರ್ಷ ಮೂಲಭೂತ ಸೌಕರ್ಯಗಳ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡುವುದಾಗಿ ಶಾಸಕ ಕೆ.ಹರೀಶ್ ಗೌಡ ಭರವಸೆ ನೀಡಿದ್ದಾರೆ.
ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ 21ನೇ ವಾರ್ಡ್ ವ್ಯಾಪ್ತಿಯ ಕುದುರೆಮಾಳ ಹಾಗೂ ಕುಕ್ಕರಹಳ್ಳಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಇದಲ್ಲದೇ ಕುಕ್ಕರಹಳ್ಳಿ ರಂಗಮಂಟಪ ಹಾಗೂ ಅಂಬೇಡ್ಕರ್ ಸಮುದಾಯ ಭವನದ ಒಂದನೇ ಮಹಡಿಯ ಕಟ್ಟಡದ ಉದ್ಘಾಟನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಅತಿ ಹೆಚ್ಚು ಮತಗಳನ್ನು ಈ ಭಾಗದ ಜನತೆ ನನಗೆ ನೀಡಿ ಆಶೀರ್ವದಿಸಿದ್ದಾರೆ. ಹಳೆಯದಾದ ಒಳಚರಂಡಿ ವ್ಯವಸ್ಥೆ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ ಎಂದರು.
ಈ ಭಾಗದಲ್ಲಿ ಮುಂದಿನ 30 ವರ್ಷಗಳ ಕಾಲ ಮೂಲಭೂತ ಸೌಕರ್ಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.