ಮೈಸೂರು: 19ನೇ ಬಜೆಟ್ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ಹೇಳುವ ಮೂಲಕ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು, ಸಿಎಂ ಸಿದ್ದರಾಮಯ್ಯ ಮುಂದೆಯೂ ಬಜೆಟ್ ಮಂಡಿಸುತ್ತಾರೆ. ಒಟ್ಟು 19 ಬಜೆಟ್‌ಗಳನ್ನು ಸಿದ್ದರಾಮಯ್ಯ ಮಂಡಿಸುತ್ತಾರೆ. ಇದರಲ್ಲಿ ಯಾವುದೇ ಸಂದೇಹಗಳು ಬೇಡ ಎಂದರು.
ಇನ್ನು ಮುಂದಿನ ಬಾರಿ ಬಜೆಟ್ ಮಂಡನೆ ಮಾಡೋದು ಸಿದ್ದರಾಮಯ್ಯ ಅವರೇ. ಮುಂದಿನ ಬಜೆಟ್ ಕೂಡ ಅವರದ್ದೇ, ಅದರ ನಂತರದ ಬಜೆಟ್ ಕೂಡ ಅವರದ್ದೇ. ಹೈಕಮಾಂಡ್ ಹಾಗೂ ಶಾಸಕರು ಸಿದ್ದರಾಮಯ್ಯ ಪರ ಇದ್ದಾರೆ. ಈ ಹಿನ್ನೆಲೆಯಲ್ಲಿ 19 ಬಾರಿ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಮೂಲಕ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ಬಜೆಟ್ ಎಂದು ಪದೇ ಪದೇ ಹೇಳಿಕೊಳ್ಳುತ್ತಿದ್ದ ಬಿಜೆಪಿ ನಾಯಕರಿಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.