ಮೈಸೂರು ನಗರ

ಸಿದ್ದರಾಮಯ್ಯ ಮುಂದಿನ ಬಾರಿಯೂ ಬಜೆಟ್‌ ಮಂಡಿಸುತ್ತಾರೆ: ಸಚಿವ ಎಚ್.ಸಿ.ಮಹದೇವಪ್ಪ ವಿಶ್ವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಮುಂದಿನ ಬಾರಿಯೂ ಬಜೆಟ್‌ ಮಂಡಿಸುತ್ತಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ವಿಚಾರ ಪದೇ ಪದೇ ಮುನ್ನೆಲೆಗೆ ಬರುತ್ತಲೇ ಇದೆ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಅಲ್ಲಿಗೆ ಡಿ.ಕೆ.ಶಿವಕುಮಾರ್‌ ಅವರನ್ನು ಕೂರಿಸಬೇಕು ಎಂದು ತೆರೆಮರೆಯಲ್ಲಿ ಆಟ ಶುರುವಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ನಾಯಕರು ಸಿಎಂ ಬದಲಾವಣೆ ಬಗ್ಗೆ ಬಾಂಬ್‌ ಸಿಡಿಸಿದ್ದು, ಮುಂದಿನ ನವೆಂಬರ್‌ ತಿಂಗಳ ಒಳಗೆ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಇದರ ಜೊತೆಗೆ ಮಾರ್ಚ್.‌7ರಂದು ಮಂಡಿಸಿದ ಬಜೆಟ್‌ ಸಿಎಂ ಸಿದ್ದುಗೆ ಕೊನೆಯ ಬಜೆಟ್‌ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು.

ಈ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿದ್ದರಾಮಯ್ಯ ಮುಂದಿನ ಬಾರಿಯೂ ಬಜೆಟ್‌ ಮಂಡಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಬಿಜೆಪಿಯವರು ಸುಖಾ ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ. ಮೊದಲು ಬಿಜೆಪಿಯವರು ತಮ್ಮ ಪಕ್ಷವನ್ನು ಗಟ್ಟಿ ಮಾಡಿಕೊಳ್ಳಲಿ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ. ರಾಜ್ಯದಲ್ಲಿ ಅಧಿಕಾರ ಹಸ್ತಾಂತರವೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

5 mins ago

ಜನರ ನಂಬಿಕೆ ಕಳೆದುಕೊಂಡ ಚುನಾವಣಾ ಆಯೋಗ

ಪ್ರಕಾಶ್ ರಾಜ್  ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ…

14 mins ago

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

7 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

9 hours ago