ಚುನಾವಣೆ ಸೋಲಿನಿಂದ ನಿಖಿಲ್‌ ಎದೆಗುಂದಬಾರದು: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತಿರುವ ನಿಖಿಲ್‌ ಕುಮಾರಸ್ವಾಮಿ ಎದೆಗುಂದಬಾರದು. ಚುನಾವಣೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಇಂದು(ನ.23) ಉಪಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರಾಜಿತವಾಗಿದ್ದಾರೆ. ಪ್ರತಿಬಾರಿಯೂ ಆಡಳಿತ ಪಕ್ಷವೇ ಗೆಲುವು ಸಾಧಿಸುತ್ತದೆ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ನಾನು ಹೋದವನಲ್ಲ. ನನ್ನ ಮಗ ಹರೀಶ್‌ ಗೌಡ , ಈ ಭಾಗದ ಶಾಸಕರು ಹಾಗೂ ಕಾರ್ಯಕರ್ತರೆಲ್ಲರೂ ಹೋಗಿದ್ದರು. ಅವರೆಲ್ಲರೂ ನಿಖಿಲ್‌ ಗೆಲ್ಲುತ್ತಾರೆ ಎಂದೇ ಹೇಳಿದ್ದರು. ಆದರೆ ಮೂರನೇ ಬಾರಿಗೆ ಸೋತಿದ್ದಾರೆ, ಏನೂ ಮಾಡಲು ಆಗುವುದಿಲ್ಲ. ನಿಖಿಲ್‌ ಅವರು ಧೈರ್ಯದಿಂದ ಈ ಚುನಾವಣೆಯ ಸೋಲನ್ನು ಎದುರಿಸಿ, ಮುಂದಿನ ದಿನಗಳಲ್ಲಿ ಜೆಡಿಎಸ್‌ ಪಕ್ಷವನ್ನು ಕಟ್ಟಬೇಕು. ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಸೋಲು-ಗೆಲುವು ಯಾವುತ್ತು ಕೂಡ ಇದ್ದೇ ಇರುತ್ತದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

6 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

11 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

17 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago