ಮೈಸೂರು ನಗರ

ಜೆಡಿಎಸ್‌ ರಾಜ್ಯಾಧ್ಯಕ್ಷರಾಗ್ತಾರಾ ನಿಖಿಲ್‌ ಕುಮಾರಸ್ವಾಮಿ.?: ಶಾಸಕ ಹರೀಶ್‌ ಗೌಡ ಅಚ್ಚರಿಯ ಹೇಳಿಕೆ

ಮೈಸೂರು: ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಖಾಲಿಯಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಸೇರಲಿದೆ ಎನ್ನಲಾಗಿದೆ.

ಈ ಬಗ್ಗೆ ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದು, ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗುವ ಎಲ್ಲಾ ಮುನ್ಸೂಚನೆಗಳು ಕಾಣುತ್ತಿವೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಶಾಸಕ ಹರೀಶ್‌ ಗೌಡ ಅವರು, ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಕಾರಣ ಅವರು ದೇಶದ ಎಲ್ಲಾ ರಾಜ್ಯಗಳಿಗೂ ಪ್ರವಾಸ ಕೈಗೊಳ್ಳಬೇಕು. ವಾರದಲ್ಲಿ ನಾಲ್ಕು ದಿನ ದೆಹಲಿಯಲ್ಲಿದ್ದು, ಉಳಿದ ದಿನ ಎಲ್ಲಾ ರಾಜ್ಯಗಳಿಗೂ ತೆರಳಬೇಕು. ಹೀಗಾಗಿ ವಾರದಲ್ಲಿ ಒಂದು ದಿನ ಮಾತ್ರ ಕರ್ನಾಟಕಕ್ಕೆ ಬರುತ್ತೇನೆ ಎಂದು ಸ್ವತಃ ಅವರೇ ಹೇಳಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಯಾರಿಗೆ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಬಗ್ಗೆ ಅನೇಕರು ನಮ್ಮ ಬಳಿ ಪ್ರಶ್ನೆ ಮಾಡುತ್ತಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರೇ ಪಕ್ಷವನ್ನು ರಾಜ್ಯದಲ್ಲಿ ಕಟ್ಟುತ್ತಾರೆ. ಈ ಬಗ್ಗೆ ಕುಮಾರಸ್ವಾಮಿ ಅವರೇ ನಮ್ಮ ಬಳಿ ಹೇಳಿದ್ದಾರೆ ಎಂದರು.

ಇನ್ನು ನಾನು ಯಾವುದೇ ಹುದ್ದೆ ಪಡೆಯದೇ ರಾಜ್ಯಾದ್ಯಂತ ಓಡಾಡಿ ಪಕ್ಷ ಕಟ್ಟುತ್ತೇನೆ. ಸಿನಿಮಾದಲ್ಲಿ ನಟಿಸಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಈ ಬೆನ್ನಲ್ಲೇ ಶಾಸಕ ಹರೀಶ್‌ ಗೌಡ ಕೂಡ ಈ ರೀತಿ ಹೇಳಿಕೆ ನೀಡಿರುವುದು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಜೆಡಿಎಸ್‌ ಪಕ್ಷ ಮತ್ತೆ ಕರ್ನಾಟಕದಲ್ಲಿ ಪಾರುಪತ್ಯ ಸಾಧಿಸಲು ಎಲ್ಲಾ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

1 hour ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

1 hour ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

3 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago