Mysore
24
light rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಚರ್ಚೆ ಇಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಸಿಎಂ ಕೆಳಗಿಳಿಸಲು ಟೇಡ್‌ ಫಿಕ್ಸ್‌ ಮಾಡುತ್ತಲೇ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರ ಮೇಲೆ ತನಿಖೆ ಮಾಡಿಸಲಿ. ಇ.ಡಿ, ಸಿಬಿಐನವರು ನಮ್ಮನ್ನ ಕೇಳಿ ತನಿಖೆ ಮಾಡುತ್ತಾರಾ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ ಮಾತುಕತೆ ನಡೆದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

Tags:
error: Content is protected !!